
ಸಂಜೆವಾಣಿ ವಾರ್ತೆ
ಹೊಸಪೇಟೆ.ಜೂ.1 ಪ್ರಸಕ್ತ ಸಾಲಿನ ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್.ಸಿ.ಬಿ ತಂಡ ಗುಜರಾತ್ ಟೈಟನ್ಸ್ ತಂಡವನ್ನು ಸೋಲಿಸಿ, ಕಪ್ ಮುಡಿಗೇರಿಸಿಕೊಳ್ಳುತ್ತಿದ್ದಂತೆ ನಗರದಲ್ಲಿ ಆರ್.ಸಿ.ಬಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ಜರುಗಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಆರ್.ಬಿ.ಸಿ ತಂಡ ಗೆಲುವು ಸಾಧಿಸುತ್ತಿದ್ದಂತೆ ಆರ್.ಸಿ.ಬಿ ಅಭಿಮಾನಿಗಳು, ನಗರದ ಡಾ.ಪುನೀತ್ ರಾಜ್ ಕುಮಾರ್ ವೃತ್ತ, ವಾಲ್ಮೀಕಿ ವೃತ್ತ, ಅಂಬೇಡ್ಕರ್ ವೃತ್ತ ಗಳಲ್ಲಿ ಪಟಾಕಿ ಸಿಡಿಸಿ, ಕುಣಿದು ಕುಪ್ಪಳಿಸಿ, ವಿಜಯೋತ್ಸವ ಆಚರಿಸಿದರು.
ಆರ್.ಸಿ.ಬಿ ತಂಡದ ಆಪತ್ಬಾಂಧವ ವಿರಾಟ್ ಕೊಹ್ಲಿ ಸಿಕ್ಸರ್ ಬಾರಿಸುವ ಮೂಲಕ ಆರ್.ಸಿ.ಬಿ ಗೆ ಗೆಲುವು ತಂದು ಕೊಡುತ್ತಿದ್ದಂತೆ ಅಭಿಮಾನಿಗಳು ಬೀದಿಗಿಳಿದು ನಗರದ ಪ್ರಮುಖ ರಸ್ತೆ ಮತ್ತು ವೃತ್ತಗಳಲ್ಲಿ ಪಟಾಕಿ ಸಿಡಿಸಿ, ವಿಜಯೋತ್ಸವ ಆಚರಿಸಿದರು. ಆರ್.ಸಿ.ಬಿ ಸತತ ಎರಡನೇ ಬಾರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಆಭಿಮಾನಿಗಳು ಆರ್.ಸಿ.ಬಿ, ಆರ್.ಸಿ.ಬಿ, ಜೈ ಆರ್.ಸಿ.ಬಿ ಎಂದು ಘೋಷಣೆ ಕೂಗುತ್ತಾ, ಕಪ್ ನಮ್ದೆ ಎಂದು ಅಬ್ಬರಿಸುತ್ತಾ, ಪಟಾಕಿ ಸಿಡಿಸಿ, ಕುಣಿದು ಕುಪ್ಪಳಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಯಾವುದೇ ಅಹಿತಕರ ಘಟನೆ ನಡೆಯದಂತೆ ಡಿವೈಎಸ್ಪಿ ಪಿ.ಮುರುಳೀಧರ್ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಪೊಲೀಸ್ ಬಂದೋಬಸ್ತ್ ಎರ್ಪಡಿಸಿದ್ದರು.

























