
ಸಂಜೆವಾಣಿ ವಾರ್ತೆ
ಕೆ.ಆರ್.ನಗರ, ಜೂ.24:- ಈ ಬಾರಿ ಅದ್ದೂರಿಯಾಗಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅರ್ಥಪೂರ್ಣವಾಗಿ ಇದೇ 27 ಶನಿವಾರ ಬೆಳಗ್ಗೆ 10 ಗಂಟೆಗೆ ಪಟ್ಟಣದ ತಾಲೂಕು ಆಡಳಿತ ಸೌದದ ಆವರಣದಲ್ಲಿ ಆಚರಿಸಲಾಗುವುದು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ತಾಲೂಕು ಕಚೇರಿಯ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ-ಸಂಸ್ಥೆಗಳ ಮುಖ್ಯಸ್ಥರು ಹಾಗೂ ಒಕ್ಕಲಿಗ ಸಮುದಾಯದ ಮುಖಂಡರೊಟ್ಟಿಗೆ ನಡೆದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಜೂನ್ 27ರಂದು ರಾಜ್ಯದಾದ್ಯಂತ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸಲಾಗುತ್ತದೆ.ಅಂದೇ ಪಟ್ಟಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಗೆ ಸಕಲ ಸಿದ್ಧತೆಗಳನ್ನು ತಾಲೂಕು ಆಡಳಿತ ವ್ಯವಸ್ಥೆ ಮಾಡಲಿದೆ ಹಾಗಾಗಿ ಕಾರ್ಯಕ್ರಮದ ಯಶಸ್ವಿಗೆ ಎಲ್ಲ ಇಲಾಖೆ ಅಧಿಕಾರಿಗಳು ಮತ್ತು ನೌಕರರು ಸಹಕಾರ ನೀಡಬೇಕು. ನಿಗದಿತ ಸಮಯದಲ್ಲಿ ಹಾಜರಿದ್ದು, ಮೆರವಣಿಗೆ ವೇದಿಕೆ ಕಾರ್ಯಕ್ರಮಗಳನ್ನು ನಡೆಸ ಬೇಕು’ ಎಂದು ತಿಳಿಸಿದರು.
ಸರ್ವಾಲಂಕೃತ ಬೆಳ್ಳಿ ರಥದಲ್ಲಿ ನಾಡಪ್ರಭು ಕೆಂಪೇಗೌಡ ಭಾವಚಿತ್ರವನ್ನು ಮಂಗಳವಾದ್ಯ, ಜಾನಪದ ಕಲಾತಂಡಗಳ ಕಲಾ ಪ್ರದರ್ಶನ ಹಾಗೂ ಪೂರ್ಣಕುಂಭದೊಂದಿಗೆ ಮೆರವಣಿಗೆ ನಡೆಸಲಾಗುವುದು ಎಂದರಲ್ಲದೆ ಮೆರವಣಿಗೆಯನ್ನು ಕಾಲೇಜು ಆವರಣದಿಂದ ಗರುಡಗಂಭ ವೃತ್ತ ಮೂಲಕ ಸಾಗಿ ಹಾಸನ- ಮೈಸೂರು ರಸ್ತೆ ಮಾರ್ಗವಾಗಿ ಪುರಸಭೆ ವೃತ್ತದ ಮೂಲಕ ತಾಲೂಕು ಆಡಳಿತ ಸೌದದ ಆವರಣಕ್ಕೆ ಆಗಮಿಸಲಿದೆ ಎಂದು ತಿಳಿಸಿದರು ಮೆರವಣಿಗೆ ಬರುವ ರಸ್ತೆಯಲ್ಲಿ ಪುರಸಭೆ ವತಿಯಿಂದ ತಳಿರು ತೋರಣಗಳಿಂದ ಶೃಂಗಾರಗೊಳಿಸ ಬೇಕು ಎಂದು ಪಟ್ಟಣದ ಪುರಸಭೆ ಮುಖ್ಯಾಧಿಕಾರಿ ರಮೇಶ್ ಅವರಿಗೆ ಸೂಚಿಸಿದರು.
ವೇದಿಕೆ ಕಾರ್ಯಕ್ರಮದಲ್ಲಿ ನಾಡಪ್ರಭು ಕೆಂಪೇಗೌಡರ ಬಗ್ಗೆ ಉತ್ತಮ ವಾಗ್ಮಿಗಳಿಂದ ಪ್ರಧಾನ ಭಾಷಣಕಾರರು ಮಾತನಾಡಲಿದ್ದಾರೆ.
ಇದೇ ಸಂದರ್ಭದಲ್ಲಿ ಕೃಷಿ, ಜಾನಪದ, ಆರೋಗ್ಯ, ಶಿಕ್ಷಣ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಪ್ರಮುಖರನ್ನು ತಾಲೂಕು ಮಟ್ಟದ ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಮತ್ತು ನೌಕರ ವರ್ಗ ಸೇರಿದಂತೆ ನಾಗರಿಕ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಮಾರಂಭವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಸಮುದಾಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಗುವುದು. ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಮನವಿ ಮಾಡಿದರು.
ತಹಸೀಲ್ದಾರ್ ಗಳಾದ ಜಿ.ಸುರೇಂದ್ರಮೂರ್ತಿ, ರುಕೀಯ ಬೇಗಂ, ತಾ.ಪಂ.ಇಒ ಗಳಾದ ಕುಲದೀಪ್, ಎ.ಎನ್.ರವಿ, ಪೆÇಲೀಸ್ ಇನ್ಸ್ ಪೆಕ್ಟರ್ ಶಿವಪ್ರಕಾಶ್, ಬಿಇಓ ಆರ್.ಕೃಷ್ಣಪ್ಪ, ಸಿಡಿಪಿಓ ಅಣ್ಣಯ್ಯ, ಸಾಮಾಜಿಕ ವಲಯ ಅರಣ್ಯಾಧಿಕಾರಿ ಹರಿಪ್ರಸಾದ್, ಕೃಷಿ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್, ಪುರಸಭೆ ಮುಖ್ಯಾಧಿಕಾರಿ ಜಿ.ಎಸ್.ರಮೇಶ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗಡ್ಡಮಹೇಶ್, ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯ್ ಶಂಕರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಜೆ.ರಮೇಶ್, ತಾಲೂಕು ಕಾಂಗ್ರೆಸ್ ವಕ್ತಾರ ಜಾಬೀರ್, ಸಾಲಿಗ್ರಾಮ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಭಾಕರ್, ಸಾಲಿಗ್ರಾಮ ಎಸ್.ಸಿ.ಘಟಕದ ಅಧ್ಯಕ್ಷ ಕಂಠಿಕುಮಾರ್, ಸರ್ಕಾರ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಿಡಿಸಿ ಸದಸ್ಯ ವೈ.ಎಸ್.ಜಯಂತ್, ಪುರಸಭೆ ಮಾಜಿ ಸದಸ್ಯ ಎಂ.ನಟರಾಜ್, ವಿನಯ್, ರಾಜ್ಯ ರೈತ ಪರ್ವ ಸಂಘದ ಗೌರವಾಧ್ಯಕ್ಣ ಜೆ.ಎಂ.ಕುಮಾರ್, ಒಕ್ಕಲಿಗ ಸಮುದಾಯದ ಮುಖಂಡರಾದ ಹೆಬ್ಬಾಳು ನಾಗೇಂದ್ರ, ಸಾಲಿಗ್ರಾಮ ಬಾಬು, ರಘು, ಕೊತ್ವಾಲ್ ಮಂಜು, ಮೇಲೂರು ಮಧುಕುಮಾರ್, ಅರ್ಜುನಹಳ್ಳಿ ಸಂಪತ್ ಮೊದಲಾದವರು ಇದ್ದರು
























