Home ಜಿಲ್ಲೆ ಈದ್ ಮಿಲಾದ್ ಹಬ್ಬದ ಪೂರ್ವಭಾವಿ ಸಭೆ

ಈದ್ ಮಿಲಾದ್ ಹಬ್ಬದ ಪೂರ್ವಭಾವಿ ಸಭೆ

ಸಂಜೆವಾಣಿ ವಾರ್ತೆ:

ಕೊಟ್ಟೂರು: ಆಗಸ್ಟ್ 23:-ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ಪಟ್ಟಣದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶನಿವಾರ ಪೂರ್ವಭಾವಿ ಸಭೆ ನಡೆಯಿತು.ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು, ವಿವಿಧ ಸಮುದಾಯಗಳ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿ ಹಬ್ಬದ ಆಚರಣೆಗೆ ಸಂಬಂಧಿಸಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಪೊಲೀಸ್ ಇನ್ಸ್ಪೆಕ್ಟರ್ ಡಿ ದುರುಗಪ್ಪ ಈದ್ ಮಿಲಾದ್ ಹಬ್ಬವನ್ನು ಶಾಂತಿಯುತವಾಗಿ ಹಾಗೂ ಸೌಹಾರ್ದಯುತವಾಗಿ ಆಚರಿಸುವಂತೆ ಮನವಿ ಮಾಡಿದರು. ಮೆರವಣಿಗೆ ಸೇರಿದಂತೆ ಯಾವುದೇ ಕಾರ್ಯಕ್ರಮ ನಡೆಸುವಾಗ ಪೊಲೀಸ್ ಇಲಾಖೆಯ ನಿಯಮಗಳನ್ನು ಪಾಲಿಸಬೇಕು ಎಂದು ಸೂಚಿಸಿದರು.ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ, ಪರಸ್ಪರ ಸಹಕಾರ ಹಾಗೂ ಸಹಬಾಳ್ವೆಯ ಮೂಲಕ ಹಬ್ಬವನ್ನು ಆಚರಿಸಬೇಕು ಎಂದು ಅಧಿಕಾರಿಗಳು ತಿಳಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಅಥವಾ ಪ್ರಚೋದನಕಾರಿ ಸಂದೇಶಗಳನ್ನು ಹರಡದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಯಿತು.ಸಭೆಯಲ್ಲಿ ಧಾರ್ಮಿಕ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಮಾತನಾಡಿ, ಈದ್ ಮಿಲಾದ್ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಆಯುಬ್ ಖಾನ್, ನೂರುಲ್ಲಾಖಾನ್ ದುರುಗೇಶ್, ಮಲ್ಲಿಕಾರ್ಜುನ, ಜಬಿವುಲ್ಲಾ, ಭಾಷಾ ಸಾಬ್, ಶರೀಫ್ ಸಾಬ್ ಸೇರಿದಂತೆ ಅನೇಕರು ಹಾಜರಿದ್ದರು