Home ಜಿಲ್ಲೆ ಮಂಗಳೂರು ಉಡುಪಿ: ಮಾರ್ಗಸೂಚಿ ಉಲ್ಲಂಘನೆ – ೨೩ ಬಸ್ ಗಳ ವಿರುದ್ದ ಪ್ರಕರಣ ದಾಖಲು

ಉಡುಪಿ: ಮಾರ್ಗಸೂಚಿ ಉಲ್ಲಂಘನೆ – ೨೩ ಬಸ್ ಗಳ ವಿರುದ್ದ ಪ್ರಕರಣ ದಾಖಲು

ಉಡುಪಿ, ಆ.೪: ಉಡುಪಿ ಆರ್‌ಟಿಓ ಹಾಗೂ ಸಂಚಾರ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಮಾರ್ಗಸೂಚಿ ಪಾಲಿಸದ ಒಟ್ಟು ೨೩ ಬಸ್‌ಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇತ್ತೀಚೆಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ರಸ್ತೆ ಸುರಕ್ಷತಾ ಸಭೆಯಲ್ಲಿ ನೀಡಲಾದ ಮಾರ್ಗಸೂಚಿಗಳನ್ನು ಬಸ್‌ಗಳು ಪಾಲಿಸುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಈ ವಿಶೇಷ ತಪಾಸಣಾ ಕಾರ್ಯಚರಣೆ ನಡೆಸಲಾಗಿದೆ.
ಉಡುಪಿ ನಗರದಲ್ಲಿ ಸೋಮವಾರ ಉಡುಪಿ ಸಂಚಾರ ಪೊಲೀಸ್ ಠಾಣೆಯಿಂದ ನಡೆದ ಕಾರ್ಯಾಚರಣೆಯಲ್ಲಿ ೧೫ ಪ್ರಕರಣ ಹಾಗೂ ಜು.೨೭ರಂದು ಕುಂದಾಪುರ ಸಂಚಾರ ಪೊಲೀಸ್ ಠಾಣೆಯಿಂದ ನಡೆದ ಕಾರ್ಯಾಚರಣೆಯಲ್ಲಿ ೮ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಒಟ್ಟು ೧೧,೫೦೦ರೂ. ದಂಡವನ್ನು ವಸೂಲಿ ಮಾಡಲಾಗಿದೆ. ಈ ಕಾರ್ಯಚರಣೆ ಯನ್ನು ಮುಂದುವರಿಸಲಾಗುವುದು ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.