Home ಜಿಲ್ಲೆ ಕಂಪ್ಲಿಯಲ್ಲಿ ಸಿಲಿಂಡರ್ ಬ್ಲಾಸ್ಟ್  ಸಾಮಾನುಗಳು ಭಸ್ಮ

ಕಂಪ್ಲಿಯಲ್ಲಿ ಸಿಲಿಂಡರ್ ಬ್ಲಾಸ್ಟ್  ಸಾಮಾನುಗಳು ಭಸ್ಮ

(ಸಂಜೆವಾಣಿ ವಾರ್ತೆ)

ಬಳ್ಳಾರಿ, ಏ.27: ಜಿಲ್ಲೆಯ ಕಂಪ್ಲಿ ಪಟ್ಟಣದ 4ನೇ ವಾರ್ಡ್ನಲ್ಲಿ  ಯಲ್ಲಪ್ಪ ಅವರ ಮನೆಯಲ್ಲಿ ನಿನ್ನೆ ಸಿಲಿಂಡರ್ ಸ್ಫೋಟ ಸಂಭವಿಸಿ ಮನೆಗೆ ವ್ಯಾಪಕ ಹಾನಿಯಾಗಿದೆ.  ಸ್ಫೋಟದ ತೀವ್ರತೆಗೆ ಮನೆಯಲ್ಲಿದ್ದ ಸಾಮಾನುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.

ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿಕೊಂಡು ಮನೆಯನ್ನು ಆವರಿಸಿತು. ಬೆಂಕಿಯ ಕೆನ್ನಾಲಿಗೆಗೆ ಮನೆಯ ಮೇಲ್ಚಾವಣಿ ಸಂಪೂರ್ಣ ಸುಟ್ಟು ಹೋಗಿದ್ದು, ಒಳಗಿದ್ದ ಪೀಠೋಪಕರಣಗಳು, ಗೃಹೋಪಯೋಗಿ ವಸ್ತುಗಳು ಹಾಗೂ ಇತರೆ ಸಾಮಾನುಗಳು ಭಸ್ಮವಾಗಿವೆ.

ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳ್  ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕೆಲಕಾಲ ಕಾರ್ಯಾಚರಣೆ ನಡೆಸಿದ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ಮತ್ತಷ್ಟು ಅನಾಹುತ ತಪ್ಪಿಸಲಾಯಿತು.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಲಿಂಡರ್ ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಮಾಹಿತಿ ಕಲೆಹಾಕಿದರು.