Home ಜಿಲ್ಲೆ ಮಂಗಳೂರು ಕಡಲತೀರ ಸ್ವಚ್ಛತಾ ಅಭಿಯಾನ

ಕಡಲತೀರ ಸ್ವಚ್ಛತಾ ಅಭಿಯಾನ

ಮಂಗಳೂರು-ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, ರಾಜ್ಯ ಸರ್ಕಾರದ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಸಹಯೋಗದೊಂದಿಗೆ  ನಗರದ ತಣ್ಣೀರುಬಾವಿ ಕಡಲತೀರದಲ್ಲಿ (ಟ್ರೀ ಪಾರ್ಕ್) ಬೃಹತ್ ಪ್ರಮಾಣದ ಕಡಲತೀರ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಅಂತರರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನ ೨೦೨೬ ರ ಅಂಗವಾಗಿ ದೇಶಾದ್ಯಂತ ಹಮ್ಮಿಕೊಳ್ಳಲಾದ ’ಸ್ವಚ್ಛ ಸಾಗರ-ಸುರಕ್ಷಿತ ಸಾಗರ ೫.೦’ ಅಭಿಯಾನದ ಅವಿಭಾಜ್ಯ ಅಂಗವಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್.ಎಂ.ಪಿ.ಎ ಹಿರಿಯ ಸಾಗರ ಇಂಜಿನಿಯರ್ ಅವಿನಾಶ್ ಬಿ. ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಿ.ಐ.ಎಸ್.ಎಫ್, ಎನ್.ಎಂ.ಪಿ.ಎ, ಎಂ.ಒ.ಇ.ಎಫ್ ನೋಡಲ್ ಅಧಿಕಾರಿ, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಮಂಗಳೂರು ಮಹಾನಗರಪಾಲಿಕೆ, ಆರೋಗ್ಯ ಇಲಾಖೆ, ಸ್ಥಳೀಯ ಪೊಲೀಸ್ ಹಾಗೂ ವಿವಿಧ ಸ್ಥಳೀಯ ಸಂಘಟನೆಗಳು ಇದಕ್ಕೆ ಸಹಕಾರ ನೀಡಿದವು. ಯೆನೊಪೊಯಾ ಡೀಮ್ಡ್ ಟು ಬಿ ಯೂನಿವರ್ಸಿಟಿ, ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿ ಮತ್ತು ಸ್ವಸ್ತಿಕ್ ನ್ಯಾಷನಲ್ ಬಿಸಿನೆಸ್ ಸ್ಕೂಲ್‌ನ ವಿದ್ಯಾರ್ಥಿಗಳು ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.