
ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜುಲೈ ೨೭ ರಿಂದ ಜುಲೈ ೩೧ರವರೆಗೆ ಸಾಧಾರಣದಿಂದ ಭಾರಿ ಹಾಗೂ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (Iಒಆ), ಬೆಂಗಳೂರು ಕೇಂದ್ರವು ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ ೩೦ ರಿಂದ ೪೦ ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಉಡುಪಿ ಮತ್ತು ಉತ್ತರ ಕನ್ನಡ:ಒಂದೆರಡು ಕಡೆಗಳಲ್ಲಿ ಭಾರಿ ಹಾಗೂ ಅತಿ ಭಾರಿ ಮಳೆಯಾಗುವ ಜೊತೆಗೆ ಗಂಟೆಗೆ ೩೦-೪೦ ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ: ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಮೀನುಗಾರರು ಮತ್ತು ಕರಾವಳಿ ತೀರದ ಸಾರ್ವಜನಿಕರು ಹಾಗೂ ಪ್ರವಾಸಿಗರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಹವಾಮಾನ ಇಲಾಖೆಯ ನಿರ್ದೇಶಕರು ಮತ್ತು ಮುಖ್ಯಸ್ಥರು ಸೂಚಿಸಿದ್ದಾರೆ.































