Home Uncategorized ಕಾರು, ಬೈಕ್ ಡಿಕ್ಕಿ: ಸವಾರ ಸಾವು

ಕಾರು, ಬೈಕ್ ಡಿಕ್ಕಿ: ಸವಾರ ಸಾವು

ಸಂಜೆವಾಣಿ ವಾರ್ತೆ
ಟಿ.ನರಸೀಪುರ.ಏ.14:-
ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು ಮುಖ್ಯ ರಸ್ತೆಯ ಕೆಂಪಯ್ಯನಹುಂಡಿ ಬಳಿ ನಡೆದಿದೆ.


55 ವರ್ಷದ ಮೂರ್ತಿ ಎಂಬುವವರೇ ಅಪಘಾತದಲ್ಲಿ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಬೈಕ್ ಹಿಂಬದಿ ಕುಳಿತಿದ್ದ ಯುವತಿ ಮಂಜುಳಾಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಸಂಬಂಧ ಟಿ.ನರಸೀಪುರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.