Home ಜಿಲ್ಲೆ ಕ್ರೀಡೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಮೇಲ್ಗೈ: ನೇಮಿರಾಜ್

ಕ್ರೀಡೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಮೇಲ್ಗೈ: ನೇಮಿರಾಜ್

 ಸಂಜೆವಾಣಿ ವಾರ್ತೆ

ಹಗರಿಬೊಮ್ಮನಹಳ್ಳಿ.ಸೆ.18 ರಾಜಮಟ್ಟದ ಕ್ರೀಡೆಯಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೇ ಹೆಚ್ಚಾಗಿ ಹೊರಹೊಮ್ಮುತ್ತಿದ್ದಾರೆ ಎಂದು ಶಾಸಕ ಕೆ ನೇಮಿರಾಜ್ ನಾಯ್ಕ ಹೇಳಿದರು. ಪಟ್ಟಣದ ಗಂ ಭೀ ತಾಲೂಕ ಕ್ರೀಡಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ  ತಾಲೂಕ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು ವಿದ್ಯಾರ್ಥಿಗಳು ವಿದ್ಯೆಯ ಜೊತೆ ಕ್ರೀಡೆಗಳನ್ನು ಬೆಳೆಸಿಕೊಳ್ಳುವಂತಹ ಮನೋಭಾವ ಇರಬೇಕು.ದೈಹಿಕ ಮತ್ತು ಮಾನಸಿಕ ಸಾಮರ್ಥ್ಯಕ್ಕೆ ಕ್ರೀಡೆ ಅತ್ಯುತ್ತಮವಾದ ಸಾಧನವಾಗಿದೆ. ತಂತ್ರಜ್ಞಾನದಲ್ಲಿ  ಇತ್ತೀಚೆಗೆ ದೈಹಿಕ ಕ್ರೀಡೆಯ  ಚಟುವಟಿಕೆಗಳು ಕುಂಠಿತಗೊಳ್ಳುತ್ತಿವೆ. ಕಾಲೇಜ್ ಮಟ್ಟದಲ್ಲಿ ದೈಹಿಕ ಶಿಕ್ಷಕರು ಇಲ್ಲದೆ ವಿದ್ಯಾರ್ಥಿಗಳು ಕ್ರೀಡೆಯಿಂದ ಹಿಂದೆ ಸರಿಯುತ್ತಿದ್ದಾರೆ. ಮುಂದಿನ ಎರಡು ದಿನದಲ್ಲಿ ಅಧಿವೇಶನ ನಡೆಯುವ ಸಂದರ್ಭದಲ್ಲಿ  ಸರ್ಕಾರದ ಗಮನಕ್ಕೆ ತಂದು ಕಾಲೇಜ್ ಗಳಲ್ಲಿ ದೈಹಿಕ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವಂತೆ ಒತ್ತಾಯಿಸುತ್ತೇನೆ  ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಜಗದೀಶ್ ಎಸ್ ಎಸ್ ಮಾತನಾಡಿದರು. ಈ ಸಂದರ್ಭದಲ್ಲಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಸ್ ರಾಜಕುಮಾರ್ ನಾಯ್ಕ್, ದೈಹಿಕ ಶಿಕ್ಷಣ ಪರಿವೀಕ್ಷಕ ಹೆಚ್ ಸೋಮಪ್ಪ,  ರಾಜ್ಯ ನೌಕರ ಸಂಘದ ಅಧ್ಯಕ್ಷ ಎಂಪಿಎಂ ಮಂಜುನಾಥ, ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್. ಲೋಕಪ್ಪ , ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರವಿಚಂದ್ರ ನಾಯ್ಕ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಟಿ ಜಿ ಬಸವರಾಜ್, ಎಸ್ಸಿ ಎಸ್ಟಿ ಪ್ರಾಥಮಿಕ ಸಂಘದ ಅಧ್ಯಕ್ಷ ಟಿ ಸೋಮಶೇಖರ್, ಎನ್ಪಿಎಸ್ ನೌಕರ  ಸಂಘದ ಅಧ್ಯಕ್ಷ ಮೋಹನ್ ಅಣಜಿ, ಸಾವಿತ್ರಿಬಾಯಿ ಫುಲೆ ಶಿಕ್ಷಕರ ಸಂಘದ ಅಧ್ಯಕ್ಷೆ ಕೆಬಿ.ದೀಪಿಕಾ, ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ  ರಾಜಶೇಖರ್, ಇತರರಿದ್ದರು ಕಾರ್ಯಕ್ರಮವನ್ನು ಶಿವಲಿಂಗಸ್ವಾಮಿ, ಗುರು ಬಸವರಾಜ್, ಶಾರದಾ ಮಂಜುನಾಥ್ ನಿರ್ವಹಿಸಿದರು.