Home ಜಿಲ್ಲೆ ತಿಲಕ್ ನಗರದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ

ತಿಲಕ್ ನಗರದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ

(ಸಂಜೆವಾಣಿ ಪ್ರತಿನಿಧಿಯಿಂದ)

ಬಳ್ಳಾರಿ,ಜು.7: ನಗರದ 34ನೇ ವಾರ್ಡಿನ ತಿಲಕ್ ನಗರದ ಸಾಯಿಬಾಬಾ ದೇವಸ್ಥಾನ ಸಮೀಪ 2.90 ಕೋಟಿ ವೆಚ್ಚದ ರಸ್ತೆ ಡಾಂಬರೀಕರಣ, ಒಳಚರಂಡಿ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಪಾದಚಾರಿ ಮಾರ್ಗ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಭೂಮಿಪೂಜೆ ನೆರವೇರಿತು.

ಮಹಾನಗರ ಪಾಲಿಕೆ ಮಾಜಿ ಮೇಯರ್ ಹಾಗೂ ಹಾಲಿ ಸದಸ್ಯೆ ರಾಜೇಶ್ವರಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ಬಿ.ವೆಂಕಟೇಶ್ ಪ್ರಸಾದ್ ಭಾಗವಹಿಸಿದ್ದರು.

ತಿಲಕ್ ನಗರದ ನಿವಾಸಿಗಳಿಗೆ ಉತ್ತಮ ಗುಣಮಟ್ಟದ ರಸ್ತೆ, ಸುಸಜ್ಜಿತ ಒಳಚರಂಡಿ ವ್ಯವಸ್ಥೆ, ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಹಾಗೂ ಸುರಕ್ಷಿತ ಪಾದಚಾರಿ ಮಾರ್ಗ ನಿರ್ಮಾಣವಾಗಲಿದ್ದು, ವಾರ್ಡಿನ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಜನಾರ್ದನ, ಮಂಜುನಾಥ್, ಜಂಬಣ್ಣ, ರವಿಕುಮಾರ್, ಶಮೀಮ್, ಶಾಸ್ತ್ರಿ, ಶ್ರೀನಾಥ್ ರೆಡ್ಡಿ, ಬಿ.ಎ. ಮಲ್ಲೇಶ್ವರಿ, ಯೋಗಾನಂದ ರೆಡ್ಡಿ ಮತ್ತಿತರರು ಇದ್ದರು.