
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಆ.13: ನಗರದಲ್ಲಿ 80 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಬಿಜೆಪಿಯಿಂದ ನಗರದಲ್ಲಿ ಇಂದು ತಿರಂಗಾ ಯಾತ್ರೆ ನಡೆಸಲಾಯ್ತು.
ದುರ್ಗಮ್ಮ ದೇವಸ್ಥಾನದಿಂದ ಆರಂಭಗೊಂಡ ಯಾತ್ರೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಶಾಲಾ ಮಕ್ಕಳು ಪಾಲ್ಗೊಂಡಿದ್ದರು.
ಅಲ್ಲಿಂದ ಅಂಡರ್ ಬ್ರಿಡ್ಜ್, ಗಡಗಿ ಚೆನ್ನಪ್ಪ ಸರ್ಕಲ್, ಬೆಂಗಳೂರು ರಸ್ತೆ, ತೇರು ಬೀದಿ ಮೂಲಕ ಗವಿಯಪ್ಪ ಸರ್ಕಲ್ ಗೆ ಬಂದು ತಲುಪಿತು..
ನಗರದ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಯಾತ್ರೆಗೆ ಚಾಲನೆ ನೀಡಿದರು. 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜವನ್ನು ಹಿಡಿದು ವಿವಿಧ ಶಾಲಾ–ಕಾಲೇಜುಗಳ ವಿದ್ಯಾರ್ಥಿಗಳು ಸಾಗಿದ್ದು ಸಾರ್ವಜನಿಕರ ಗಮನ ಸೆಳೆಯಿತು.
ಜೊತೆಗೆ ದೇಶಭಕ್ತಿ ಹಾಗೂ ರಾಷ್ಟ್ರಾಭಿಮಾನದ ಸಂದೇಶ ಸಾರಲಾಯಿತು. ತಿರಂಗಾ ಯಾತ್ರೆ ಯುದ್ದಕ್ಕೂ ದೇಶಭಕ್ತಿ ಘೋಷಣೆಗಳು ಮೊಳಗಿಸಿ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಹೆಚ್ಚಿಸಿದರು.






























