
ಸಂಜೆವಾಣಿ ವಾರ್ತೆ
ಚಾಮರಾಜನಗರ, ಮೇ.26- ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಪದೇ ಪದೇ ಇಂಧನ ಏರಿಕೆ ಖಂಡಿಸಿ ಹಾಗೂ ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆಸಿ, ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡಿರುವ ಬಿಜೆಪಿ ಸರ್ಕಾರದ ವಿರುದ್ದ ನಗರದಲ್ಲಿ ಚಾ.ನಗರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನ ಮುಂಭಾಗದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಅಕ್ಷಯ್ ಹಾಗೂ ಗ್ರಾಮಾಂತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸಶೆಟ್ಟಿ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಸಮಾವೇಶಗೊಂಡು ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತದಲ್ಲಿ ಕೆಲ ಕಾಲ ಧರಣಿ ನಡೆಸಿ, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಉನ್ನತ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ದ ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯುವ ಕಾಂಗ್ರೆಸ್ ಅಧ್ಯಕ್ಷ ಅಕ್ಷಯ್ ಬಿಜೆಪಿ ಪಕ್ಷ ಬೆಲೆ ಏರಿಕೆಯನ್ನು ತಡೆಯುತ್ತಿವೆ. ಇಂಧನ ದರ ಇಳಿಕೆ ಮಾಡುತ್ತೇವೆ ಎಂದು ಸುಳ್ಳು ಹೇಳಿಕೊಂಡು ದೇಶದಲ್ಲಿ ಅಧಿಕಾರಕ್ಕೆ ಬಂತು. ಅಲ್ಲಿಂದ ಬಡವರು, ಮಧ್ಯ ವರ್ಗದವರನ್ನು ಸಲುಗೆ ಮಾಡುತ್ತಿವೆ. ಪ್ರಾಚ್ಯಾ ದೇಶದಲ್ಲಿ ಯುದ್ದ ನಡೆಯುತ್ತಿದ್ದೇವೆ ಎಂಬ ನೆಪ ಮಾಡಿಕೊಂಡು ದೇಶದಲ್ಲಿ ಪದೇ ಪದೇ ಇಂಧನ ದರವನ್ನು ಏರಿಕೆ ಮಾಡಿರುವುದು ಸರಿಯಲ್ಲ. ಈ ಕೂಡಲೇ ಕೇಂದ್ರ ಸರ್ಕಾರ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು ಎಂದು ಒತ್ತಾಯಿಸಿದರು.
ಗ್ರಾಮಾಂತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸಶೆಟ್ಟಿ ಮಾತನಾಡಿ, ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿ, ಭಾರಿ ಪ್ರಮಾಣದಲ್ಲಿ ಭ್ರಷ್ಟಚಾರ ಮಾಡಿದೆ. ಇದರಿಂದ ಲಕ್ಷಾಂತರ ಮಂದಿ ವಿದ್ಯಾರ್ಥಿಗಳ ಬದುಕು ಬೀದಿಗೆ ಬಿದ್ದಿದೆ. ನೀಟ್ ಬರೆದು ವೈದ್ಯಕೀಯ ವೃತ್ತಿಯನ್ನು ಮಾಡಬೇಕೆಂದು ಕನಸು ಕಟ್ಟಿಕೊಂಡಿದ್ದು ಅನೇಕ ವಿದ್ಯಾರ್ಥಿಗಳು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದರ ನೈತಿಕೆ ಹೊಣೆ ಹೊತ್ತು ಉನ್ನತ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು. ನೀಟ್ ಮರು ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಿ, ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಬೇಕೇಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಾಗರತ್ನಕೆಂಗಾಕಿ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಿರಣ್ ಗಿಡ್ಡಯ್ಯ, ಜಿಲ್ಲಾ ಉಪಾಧ್ಯಕ್ಷ ಸೈಯದ್ ಇಸ್ಮಾಯಿಲ್, ಸಂಜಯ್, ಪÀದಾಧಿಕಾರಿಗಳಾದ ಅನಂತ್ಕುಮಾರ್, ನಲ್ಲೂರು ಮನು, ನಲ್ಲೂರು ಮೋಳೆ ಚಂದ್ರು ಶಶಾಂಕ್, ಮುತ್ತುರಾಮು ಮೊದಲಾದವರು ಇದ್ದರು.
























