
ಮಂಗಳೂರು-ಪ್ರಗತಿ ಸಹಕಾರಿ ಸಂಘ ನಿಯಮಿತ, ಕುಲಶೇಖರ, ಮಂಗಳೂರು ಇದರ ೩೬ನೇ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ ೨೦ರಂದು ಕುಲಶೇಖರದ ಕೊರ್ಡೇಲ್ ಹಾಲ್ನಲ್ಲಿ ಸಂಸ್ಥೆಯ ಅಧ್ಯಕ್ಷರಾದ ಜೋಸ್ಸಿ ಸಿಕ್ವೇರಾ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.
ಪ್ರಾರ್ಥನೆ ಹಾಗೂ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಕಳೆದ ಸಾಲಿನಲ್ಲಿ ನಿಧನರಾದ ಸಂಘದ ಸದಸ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಅಧ್ಯಕ್ಷರು ಸಭೆಯನ್ನುದ್ದೇಶಿಸಿ ಸ್ವಾಗತ ಭಾಷಣ ಮಾಡಿದರು.
ಸಭೆಯಲ್ಲಿ ೨೦೨೪?೨೫ನೇ ಸಾಲಿನ ಮಹಾಸಭೆಯ ವರದಿ ಹಾಗೂ ೨೦೨೫?೨೬ನೇ ಸಾಲಿನ ವಾರ್ಷಿಕ ಆಡಳಿತ ವರದಿಯನ್ನು ಮಂಡಿಸಿ ಅಂಗೀಕರಿಸಲಾಯಿತು. ೨೦೨೫?೨೬ನೇ ಸಾಲಿನ ಲೆಕ್ಕಪರಿಶೋಧಿತ ಜಮಾ-ಖರ್ಚು, ಲಾಭ-ನಷ್ಟ ಹಾಗೂ ಆಸ್ತಿ-ಬಾಧ್ಯತೆಗಳ ಲೆಕ್ಕಪತ್ರಗಳನ್ನು ಮಂಡಿಸಿ ಅನುಮೋದಿಸಲಾಯಿತು.
ಸಂಘವು ದಾಖಲಿಸಿದ ಲಾಭದ ಹಿನ್ನೆಲೆಯಲ್ಲಿ ಸದಸ್ಯರಿಗೆ ಶೇ.೧೪ರಷ್ಟು ಡಿವಿಡೆಂಡ್ ನೀಡಲು ಸಭೆಯಲ್ಲಿ ಅನುಮೋದನೆ ನೀಡಲಾಯಿತು.
ಇದೇ ಸಂದರ್ಭದಲ್ಲಿ ೨೦೨೫?೨೬ನೇ ಸಾಲಿನ ನಿವ್ವಳ ಲಾಭದ ವಿಂಗಡಣೆ, ೨೦೨೬?೨೭ನೇ ಸಾಲಿನ ಅಂದಾಜು ಆದಾಯ-ವೆಚ್ಚ, ಬಜೆಟ್ಗಿಂತ ಹೆಚ್ಚಿನ ವೆಚ್ಚಕ್ಕೆ ಅನುಮೋದನೆ, ಲೆಕ್ಕಪರಿಶೋಧಕರ ನೇಮಕ ಹಾಗೂ ೨೦೨೬?೨೭ನೇ ಸಾಲಿನ ಕಾರ್ಯಯೋಜನೆಗಳಿಗೆ ಸಭೆಯ ಅನುಮೋದನೆ ಪಡೆಯಲಾಯಿತು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡೆಯಲ್ಲಿ ವಿಶೇಷ ಸಾಧನೆ ಮಾಡಿದವರಿಗೆ ಸನ್ಮಾನ
ಮಹಾಸಭೆಯ ವಿಶೇಷ ಕಾರ್ಯಕ್ರಮವಾಗಿ ಸಂಘದ ಸದಸ್ಯರ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸುವ ಮೂಲಕ ಅವರ ಸಾಧನೆಗೆ ಪ್ರೋತ್ಸಾಹ ನೀಡಲಾಯಿತು. ಅಗತ್ಯವಿರುವವರಿಗೆ ವೈದ್ಯಕೀಯ ನೆರವು ನೀಡುವ ಕಾರ್ಯಕ್ರಮವೂ ನಡೆಯಿತು. ಪ್ರಶಸ್ತಿ ಪುರಸ್ಕ್ರತ ಶಿಕ್ಷಕಿಯರನ್ನು ಸನ್ಮಾನಿಸಲಾಯಿತು.
ಸಂಸ್ಥೆಯ ಅಭಿವೃದ್ಧಿ, ಸದಸ್ಯರ ಹಿತಾಸಕ್ತಿ ಹಾಗೂ ಮುಂದಿನ ಸಾಲಿನ ಕಾರ್ಯಚಟುವಟಿಕೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಂಘದ ಪ್ರಗತಿಯಲ್ಲಿ ಸದಸ್ಯರ ಸಹಕಾರ ಮತ್ತು ಸಕ್ರಿಯ ಪಾಲ್ಗೊಳ್ಳುವಿಕೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.
ನಿರ್ದೇಶಕರಾದ ರೋಮನ್ಸ್ ಲೋಬೊರವರು ಕಾರ್ಯಕ್ರಮ ನಿರ್ವಹಿಸಿದರು. ರಾಷ್ಟ್ರಗೀತೆಯೊಂದಿಗೆ ಮಹಾಸಭೆ ಸಮಾಪ್ತಿಗೊಂಡಿತು. ನಂತರ ಸದಸ್ಯರಿಗೆ ಸಮೂಹ ಭೋಜನದ ವ್ಯವಸ್ಥೆ ಮಾಡಲಾಗಿತ್ತು.


































