Home ಜಿಲ್ಲೆ ಮಂಗಳೂರು ಮಂಡೆಕೋಲು ಶಾಲೆಯಲ್ಲಿ ಸುಸಜ್ಜಿತ ಗ್ರಂಥಾಲಯ ಉದ್ಘಾಟನೆ

ಮಂಡೆಕೋಲು ಶಾಲೆಯಲ್ಲಿ ಸುಸಜ್ಜಿತ ಗ್ರಂಥಾಲಯ ಉದ್ಘಾಟನೆ

ಸುಳ್ಯ:ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ನವೀಕೃತಗೊಂಡ ಸುಸಜ್ಜಿತ ಗ್ರಂಥಾಲಯವನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೋಮವಾರ ಉದ್ಘಾಟಿಸಿದರು.
ಬಳಿಕ ಅವರು ಮಾತನಾಡಿ ನಿರಂತರ ಪುಸ್ತಕ ಓದುವ ಹವ್ಯಾಸ ನಮ್ಮ ಬದುಕನ್ನೇ ಬದಲಾಯಿಸುತ್ತದೆ. ಪುಸ್ತಕ ಓದು ಮಕ್ಕಳ ಜ್ಞಾನ ವರ್ಧಿಸುತ್ತದೆ ಎಂದು ಹೇಳಿದರು.
ಸಭೆಯ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್ ಕಣೆಮರಡ್ಕ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಮೇಶ್ ಪೆರಾಜೆ ಮಾತನಾಡಿದರು.
ಸಮಾರಂಭದಲ್ಲಿ ಶಾಸಕಿ ಭಾಗಿರಥಿ ಮುರುಳ್ಯ ಹಾಗೂ ಯೋಜನಾಧಿಕಾರಿ ಮಾಧವ ಗೌಡರನ್ನು ಎಸ್‌ಡಿಎಂಸಿ ವತಿಯಿಂದ ಗೌರವಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ವಿನುತಾ ಪಾತಿಕಲ್ಲು, ಕಾರ್ಯದರ್ಶಿ ಜಾನಕಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲಾ ಪಂಚಾಯತ್ ಅನುದಾನದಲ್ಲಿ ಸುಮಾರು ಒಂದು ಲಕ್ಷದ ಪೀಠೋಪಕರಣ, ಜಿಲ್ಲಾ ಕೇಂದ್ರ ಗ್ರಂಥಾಲಯದಿಂದ ಪುಸ್ತಕಗಳು ದೊರಕಿವೆ. ಶಾಲಾ ಹಳೆವಿಧ್ಯಾರ್ಥಿ ಸಂಘದ ಕಡೆಯಿಂದ ಎಲ್.ಕೆ.ಜಿ ತರಗತಿಗೆ ಪೀಠೋಪಕರಣಗಳನ್ನು, ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಕಡೆಯಿಂದ ಗ್ರಂಥಾಲಯಕ್ಕೆ ಪುಸ್ತಕ ಹಾಗೂ ವಿವಿಧ ಪರಿಕರಗಳನ್ನು ನೀಡಿದ್ದಾರೆ. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಹಾಗೂ ಸತ್ಯಶಾಂತಿ ತ್ಯಾಗಮೂರ್ತಿಯವರು ವಿವಿಧ ಭಾವಚಿತ್ರಗಳನ್ನು ನೀಡಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ವತಿಯಿಂದ ಮಂಜೂರಾದ ಜ್ಞಾನದೀಪ ಶಿಕ್ಷಕರಿಗೆ ಮಂಜೂರಾತಿ ಪತ್ರ ನೀಡಲಾಯಿತು.
ಶಾಲಾ ಮುಖ್ಯೋಪಾದ್ಯಾಯಿನಿ ಮಂಜುಳಾ ಅತ್ಯಾಡಿ ಪ್ರಾಸ್ತಾವಿಕ ಮಾತನಾಡಿದರು. ಶಾಲಾವಿಧ್ಯಾರ್ಥಿನಿಯರಾದ ಕಾವ್ಯಶ್ರೀ ಹಾಗೂ ದೀಪಿಕಾ ಇವರ ಪ್ರಾರ್ಥಿಸಿದರು. ಶಿಕ್ಷಕಿ ಹರ್ಷಿತಾ ಸ್ವಾಗತಿಸಿ, ಚಶ್ಮಿತಾ ಧನ್ಯವಾದ ಸಮರ್ಪಿಸಿದರು. ಶಿಕ್ಷಕಿ ವಿದ್ಯಾ ಹಾಗೂ ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ ಕಾರ್ಯಕ್ರಮ ನಿರೂಪಿಸಿದರು.