Home ಜಿಲ್ಲೆ ಮೈಸೂರು ಮಕ್ಕಳ ಹಕ್ಕುರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ನ್ಯಾ. ಈಶ್ವರ್

ಮಕ್ಕಳ ಹಕ್ಕುರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ನ್ಯಾ. ಈಶ್ವರ್

ಸಂಜೆವಾಣಿ ವಾರ್ತೆ
ಹನೂರು.ಆ.24:
– ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಮಕ್ಕಳ ಮೇಲಿನ ಯಾವುದೇ ರೀತಿಯ ದೌರ್ಜನ್ಯ, ಶೋಷಣೆ ಹಾಗೂ ಅನ್ಯಾಯವನ್ನು ತಡೆಗಟ್ಟಲು ಸಮಾಜದಲ್ಲಿ ಕಾನೂನು ಅರಿವು ಮತ್ತು ಜಾಗೃತಿ ಮೂಡಬೇಕು ಎಂದು ಚಾಮರಾಜನಗರ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರಾದ ನ್ಯಾ. ಈಶ್ವರ ಹೇಳಿದರು.


ಹನೂರು ತಾಲೂಕು ಆಡಳಿತ ತಾಲೂಕು ಕಾನೂನು ಸೇವೆಗಳ ಸಮಿತಿ ಹನೂರು ಪೆÇಲೀಸ್ ಇಲಾಖೆ ಹಾಗೂ ಕಣ್ಣೂರು ಗ್ರಾಮ ಪಂಚಾಯತಿ ಇವರ ಸಹಯೋಗದಲ್ಲಿ ತಾಲೂಕಿನ ಚೆನ್ನಾಲಿಂಗನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಅಪ್ರಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


ಮಕ್ಕಳ ಕಳ್ಳಸಾಗಣೆ, ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿ ಸೇರಿದಂತೆ ಮಕ್ಕಳ ಹಕ್ಕುಗಳಿಗೆ ಧಕ್ಕೆ ತರುವಂತಹ ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು. ಸೂಕ್ತ ಕಾನೂನು ಪ್ರಕ್ರಿಯೆ ಅನುಸರಿಸದೆ ಮಕ್ಕಳನ್ನು ದತ್ತು ಪಡೆಯುವುದು ಸಹ ಕಾನೂನುಬಾಹಿರವಾಗಿದೆ.
ಅಪಾಯಕಾರಿ ಹಾಗೂ ಅಪಾಯಕಾರಿಯಲ್ಲದ ಯಾವುದೇ ಕೆಲಸಕ್ಕೆ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಕಾನೂನುಬಾಹಿರವಾಗಿದ್ದು, ಇಂತಹ ಸಂದರ್ಭಗಳಲ್ಲಿ ಮಕ್ಕಳ ಶಿಕ್ಷಣ, ಆರೋಗ್ಯ, ಸುರಕ್ಷತೆ ಹಾಗೂ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ ಮಕ್ಕಳನ್ನು ದುಡಿಮೆಯಿಂದ ದೂರವಿಟ್ಟು ಶಿಕ್ಷಣದತ್ತ ಪೆÇ್ರೀತ್ಸಾಹಿಸಬೇಕು.


ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಶೋಷಣೆಯನ್ನು ತಡೆಗಟ್ಟಲು ಪೆÇೀಷಕರು, ಶಿಕ್ಷಕರು ಹಾಗೂ ಸಾರ್ವಜನಿಕರು ಮಕ್ಕಳ ಹಕ್ಕುಗಳ ಕುರಿತು ಅರಿವು ಹೊಂದಿರಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಸುರಕ್ಷಿತ ವಾತಾವರಣ ಕಲ್ಪಿಸುವ ಮೂಲಕ ಅವರ ಭವಿಷ್ಯವನ್ನು ರೂಪಿಸುವ ಜವಾಬ್ದಾರಿ ಸಮಾಜದ ಪ್ರತಿಯೊಬ್ಬರ ಮೇಲಿದೆ ಎಂದು ಎಂದು ತಿಳಿಸಿದರು.
ಪ್ರಧಾನ ನ್ಯಾಯಾಧೀಶರಾದ ನ್ಯಾ. ಕಾವ್ಯಶ್ರೀ ರವರು ಮಾತನಾಡಿ, ಪೆÇೀಷಕರು ಮಕ್ಕಳೊಂದಿಗೆ ಸಮಯ ಕಳೆದು, ಅವರೊಂದಿಗೆ ಮುಕ್ತವಾಗಿ ಮಾತನಾಡಿದಾಗ ಅರ್ಧದಷ್ಟು ಸಮಸ್ಯೆಗಳು ಪರಿಹಾರವಾಗುತ್ತವೆ. ಪ್ರತಿಯೊಬ್ಬ ತಂದೆ-ತಾಯಿಯೂ ಈ ಪ್ರಯತ್ನವನ್ನು ಮಾಡಬೇಕು. ಕೆಲವೇ ದಿನಗಳಲ್ಲಿ ಮಕ್ಕಳು ಪೆÇೀಷಕರನ್ನೇ ತಮ್ಮ ಉತ್ತಮ ಸ್ನೇಹಿತರನ್ನಾಗಿ ಕಾಣಲು ಪ್ರಾರಂಭಿಸುತ್ತಾರೆ.


ಮಕ್ಕಳಿಗೆ ಎಲ್ಲರನ್ನೂ ಗೌರವಿಸುವ ಗುಣವನ್ನು ಬಾಲ್ಯದಿಂದಲೇ ಕಲಿಸಬೇಕು. ಮಕ್ಕಳಿಗೆ ಎದುರಾಗುವ ತೊಂದರೆಗಳು ಹಾಗೂ ಸಮಸ್ಯೆಗಳನ್ನು ಪೆÇೀಷಕರ ಬಳಿ ಹೇಳಿಕೊಳ್ಳಲು ಕೆಲವೊಮ್ಮೆ ಭಯ ಅಥವಾ ಮುಜುಗರ ಇರುತ್ತದೆ. ಆದ್ದರಿಂದ ಪೆÇೀಷಕರು ಮಕ್ಕಳೊಂದಿಗೆ ಮುಕ್ತವಾಗಿ ಮಾತನಾಡುವ ವಾತಾವರಣವನ್ನು ನಿರ್ಮಿಸಬೇಕು. ಇದರಿಂದ ಮಕ್ಕಳು ತಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಲು ಸಾಧ್ಯವಾಗುತ್ತದೆ ಹಾಗೂ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದರು.
ಮಕ್ಕಳ ಭವಿಷ್ಯದ ಗುರಿ ಮತ್ತು ಉದ್ದೇಶಗಳ ಕುರಿತು ಪೆÇೀಷಕರು ಅವರೊಂದಿಗೆ ಚರ್ಚಿಸಬೇಕು. ಮಕ್ಕಳ ಅಭಿಪ್ರಾಯಗಳನ್ನು ಆಲಿಸಿ, ಅವರ ಆಸಕ್ತಿ ಹಾಗೂ ಸಾಮಥ್ರ್ಯಕ್ಕೆ ಅನುಗುಣವಾಗಿ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು.


ಬಾಲ್ಯ ವಿವಾಹದಿಂದ ಸಮಸ್ಯೆ ಮತ್ತಷ್ಟು ಹೆಚ್ಚಳ ಪೆÇೀಕ್ಸೋ ಪ್ರಕರಣಗಳು ಹೆಚ್ಚಾಗಲು ಬಾಲ್ಯ ವಿವಾಹವೂ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಬಾಲ್ಯ ವಿವಾಹದಿಂದ ಮಕ್ಕಳ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ, ಕುಟುಂಬ ಹಾಗೂ ಸಮಾಜದ ಮೇಲೂ ಹಲವು ರೀತಿಯ ಸಮಸ್ಯೆಗಳು ಉಂಟಾಗುತ್ತವೆ. ಅಲ್ಲದೆ, ಬಾಲ್ಯ ವಿವಾಹಕ್ಕೆ ಒಳಗಾಗುವ ಮಕ್ಕಳಿಗೂ ಕಾನೂನಾತ್ಮಕ ಹಾಗೂ ಸಾಮಾಜಿಕ ಸಮಸ್ಯೆಗಳನ್ನು ಎದುರಿಸುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದರು.


ಬಾಲ್ಯ ವಿವಾಹ ಮಾಡಿಸುವುದರಿಂದ ಮಕ್ಕಳ ಮೇಲಿನ ಜವಾಬ್ದಾರಿ ಮುಗಿಯಿತು ಎಂದು ಭಾವಿಸುವುದು ತಪ್ಪು. ಬದಲಾಗಿ, ಮಕ್ಕಳ ಜವಾಬ್ದಾರಿ ಇನ್ನಷ್ಟು ಹೆಚ್ಚಾಗುತ್ತದೆ. ಆದ್ದರಿಂದ ಬಾಲ್ಯ ವಿವಾಹವನ್ನು ತಡೆಗಟ್ಟಲು ಪೆÇೀಷಕರು, ಸಮಾಜ ಹಾಗೂ ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು ನ್ಯಾ. ಕಾವ್ಯಶ್ರೀ ತಿಳಿಸಿದರು.
ಈ ಸಂದರ್ಭದಲ್ಲಿಜಿಲ್ಲಾ ನ್ಯಾಯಮೂರ್ತಿ ನ್ಯಾ ಶ್ರೀಕಾಂತ್, ಎಸ್ ಜೆ ಕೃಷ್ಣ. , ರಂಜಿತ್ ಕುಮಾರ್, ನಿಗಮಿತ ವಿಶೇಷ ಅಭಿಯೋಜಕರು ಎಸ್. ನಾಗರಾಜು, ಪಿ.ಎಸ್.ಐ ಸಾಹೇಬ್ ಗೌಡ, ಗ್ರಾಮ ಪಂಚಾಯತಿ ಆಡಳಿತಾಧಿಕಾರಿ ಬಿ. ರಂಗನಾಥ್, ಗ್ರಾಮದ ಮುಖಂಡರಾದ ರಾಚಯ್ಯ, ರವಿ, ಪ್ರಭು, ಸಿ.ಡಿ.ಪಿ.ಒ. ಅಂಬಿಕಾ ಸೇರಿದಂತೆ ಶಾಲಾ ಶಿಕ್ಷಕ ಸಿಬ್ಬಂದಿಗಳು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.