
ಕೋಲ್ಕತ್ತಾ, ಮೇ 4: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದ್ದು ಇದೇ ಮೊದಲ ಬಾರಿಗೆ ಅಧಿಕಾರ ಹಿಡಿಯುವತ್ತ ದಾಪುಗಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು, ಕೋಲ್ಕತ್ತಾದ ಕಾಲಿಘಾಟ್ನಲ್ಲಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಧಿಕೃತ ನಿವಾಸದ ಹೊರಭಾಗದಲ್ಲಿ ಇಂದುಜೈ ಶ್ರೀರಾಮ್’ ಘೋಷಣೆಗಳನ್ನು ಕೂಗಿದ್ದಾರೆ.
ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವಿನ ವಾಕ್ಸಮರ ಮತ್ತು ಭದ್ರತಾ ವಿಚಾರಗಳಿಗೆ ಸಂಬಂಧಿಸಿದಂತೆ ಈ ಪ್ರತಿಭಟನೆ ನಡೆದಿದೆ ಎನ್ನಲಾಗಿದೆ. ಸಿಎಂ ನಿವಾಸದ ಸಮೀಪ ಜಮಾಯಿಸಿದ ನೂರಾರು ಬಿಜೆಪಿ ಕಾರ್ಯಕರ್ತರು, ಮಮತಾ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಮಮತಾ ಬ್ಯಾನರ್ಜಿ ಅವರ ನಿವಾಸದ ಪ್ರವೇಶ ದ್ವಾರದ ಬಳಿಯೇ ಬಿಜೆಪಿ ಬೆಂಬಲಿಗರು ಕೇಸರಿ ಧ್ವಜ ಹಿಡಿದು ಘೋಷಣೆಗಳನ್ನು ಕೂಗಿದ್ದಾರೆ.ಈ ದಿಢೀರ್ ಬೆಳವಣಿಗೆಯಿಂದಾಗಿ ಕಾಲಿಘಾಟ್ ಪ್ರದೇಶದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.





















