Home ಜಿಲ್ಲೆ ಮಂಗಳೂರು ಯಕ್ಷಯಾನ ೨೦೨೬: ’ಅಗರಿ ರಘುರಾಮ ಭಾಗವತ’, ’ಅಗರಿ ಪ್ರಶಸ್ತಿ’ ಪ್ರದಾನ

ಯಕ್ಷಯಾನ ೨೦೨೬: ’ಅಗರಿ ರಘುರಾಮ ಭಾಗವತ’, ’ಅಗರಿ ಪ್ರಶಸ್ತಿ’ ಪ್ರದಾನ

ಸುರತ್ಕಲ್: ಯಕ್ಷಗಾನ ಕ್ಷೇತ್ರದ ಸಾಧಕ ಶ್ರೀನಿವಾಸ ಭಾಗವತರಿಗೆ ಅವರೇ ಸಾಟಿ ಎಂದು ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಅರ್ಚಕ ವೇದಮೂರ್ತಿ ಕಮಲಾದೇವಿ ಪ್ರಸಾದ ಆಸ್ರಣ್ಣ ಹೇಳಿದ್ದಾರೆ.
ಸುರತ್ಕಲ್ ನ ಗೋವಿಂದ ದಾಸ ಕಾಲೇಜು ಹಾಗೂ ಅಗರಿ ಶ್ರೀನಿವಾಸ ಭಾಗವತರ ಸಂಸ್ಕರಣಾ ವೇದಿಕೆ ಆಶ್ರಯದಲ್ಲಿ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಯಕ್ಷ ಕೇಸರಿ ಅಗರಿ ರಘುರಾಮ ಭಾಗವತ ವೇದಿಕೆಯಲ್ಲಿ ಶನಿವಾರ ಜರುಗಿದ ’ಯಕ್ಷಯಾನ ೨೦೨೬’ ಅಗರಿ ಸಂಸ್ಕರಣೆ ಹಾಗೂ ಪ್ರಶಸ್ತಿ ಪ್ರದಾನ ಮತ್ತು ಮಂಗಳೂರು ವಿವಿಲಯ ಮಟ್ಟದ ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆಯ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾರಂಭದಲ್ಲಿ ಅಗರಿ ರಘುರಾಮ ಭಾಗವತ ಪ್ರಶಸ್ತಿಯನ್ನು ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಪ್ರತಿಷ್ಠಾನ ೫೦ಇಂಚಿನ ಎಲ್ ಇಡಿ ಟಿವಿ ನೀಡಿ ಗೌರವಿಸಲಾಯಿತು. ಅಗರಿ ಪ್ರಶಸ್ತಿಯನ್ನು ಕಟೀಲು ಮೇಳದ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ ಅವರಿಗೆ ನೀಡಿ ಗೌರವಿಸಲಾಯಿತು.
ಅಗರಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ ಕಲ್ಲಾಡಿ ದೇವಿ ಪ್ರಸಾದ್ ಶೆಟ್ಟಿ ಅವರು, ತನ್ನ ಗುರುಗಳಾದ ಶನಿವಾರ ನಿಧನರಾದ ದಿ. ಸೂರಿಕುಮೇರು ಗೋವಿಂದ ಭಟ್ ಅವರನ್ನು ಸ್ಮರಿಸಿದರು.
ಅಗರಿ ಸಂಸ್ಕರಣ ಭಾಷಣವನ್ನು ಕೃಷ್ಣ ಪ್ರಕಾಶ ಉಳಿತ್ತಾಯ ಹಾಗೂ ಅಭಿನಂದನಾ ಭಾಷಣವನ್ನು ಡಾ. ವಾದಿರಾಜ ಕಲ್ಲೂರಾಯ ಅವರು ಮಾಡಿದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಉದ್ಯಮಿ ಶ್ರೀಪತಿ ಭಟ್ ಮೂಡುಬಿದಿರೆ ವಹಿಸಿದ್ದರು. ಸುರತ್ಕಲ್ ಹಿಂದು ವಿದ್ಯಾದಾಯಿನಿ ಸಂಘದ ಅಧ್ಯಕ್ಷ ಜಯಚಂದ್ರ ಹತ್ತಾರ್‌ಎಸ್., ಕಿನ್ನಿಗೋಳಿಯ ಯುಗಪುರುಷದ ಕೆ. ಭುವನಾಭಿರಾಮ ಉಡುಪ, ಶ್ರೀನಿವಾಸ ಕಾಲೇಜಿನ ಪ್ರೊಫೆಸರ್ ಶ್ರೀನಾಥ್ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸುರತ್ಕಲ್ ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲ ಪ್ರೊ. ಹರೀಶ ಆಚಾರ್ಯ ಪಿ., ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ರಮೇಶ್ ಭಟ್ ಎಸ್. ಜಿ., ಯಕ್ಷಯಾನ ಸಂಚಾಲಕಿ ಪೂರ್ಣಿಮಾ ಯತೀಶ್ ರೈ, ಅಗರಿ ದಿನೇಶ್ ರಾವ್ ಮೊದಲಾದವರು ಉಪಸ್ಥಿತರಿದ್ದರು.
ಬೆಳಗ್ಗೆಯಿಂದ ನಡೆದ ಮಂಗಳೂರು ವಿವಿ ಮಟ್ಟದ ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ತಾಂತ್ರಿಕ ಮಹಾವಿದ್ಯಾಯ ಸಮಗ್ರ ಪ್ರಥಮ ಬಹುಮಾನ ಪಡೆದು ಕೊಂಡಿತು. ಉಜಿರೆ ಎಸ್ ಡಿಎಂ ಸ್ವಾಯತ್ತ ಕಾಲೇಜು ದ್ವಿತೀಯ ಬಹುಮಾನ ಪಡೆದುಕೊಂಡರೆ, ತೃತೀಯ ಬಹುಮಾನವನ್ನು ಮಂಗಳೂರು ವಿಶ್ವವಿದ್ಯಾಯ ಕಾಲೇಜು ಪಡೆದುಕೊಂಡಿತು.
ಬೆಳಿಗ್ಗೆ ನಡೆದ ಉದ್ಘಾಟನಾ ಕಾರ್ಯಕ್ರಮವನ್ನು ಉದ್ಯಮಿ ರಘುನಾದ ಶೆಟ್ಟಿ ಕೃಷ್ಣಾಪುರ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲ ಪ್ರೊ. ಹರೀಶ ಆಚಾರ್ಯ ಪಿ. ವಹಿಸಿದ್ದರು. ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶಕುಂತಳಾ ರಮಾನಂದ ಭಟ್ ದೀಪ ಪ್ರಜ್ವಲನೆಗೈದರು. ಸುರತ್ಕಲ್ ಹಿಂದು ವಿದ್ಯಾದಾಯಿನಿ ಸಂಘದ ಕಾರ್ಯದರ್ಶಿ ಶ್ರೀರಂಗ ಎಚ್., ಅಗರಿ ಎಂಟರ್‌ಪ್ರೈಸಸ್ ಮಾಲಕ ರಾಘವೇಂದ್ರ ರಾವ್ ಮತ್ತಿತರರು ಉಪಸ್ಥಿತರಿದ್ದರು.