
ಪುತ್ತೂರು; ದರ್ಭೆಯ ಘಟನೆಯನ್ನು ಮುಂದಿಟ್ಟುಕೊಂಡು ಧಾರ್ಮಿಕ ವೈಮನಸ್ಸು ಉಂಟು ಮಾಡುವ, ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕದಡುವ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿ ಬಂದ್ಗೆ ಕರೆ ನೀಡಿದ ಹಿನ್ನಲೆಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಮತ್ತು ಜಾಗರಣ ವೇದಿಕೆಯ ದಿನೇಶ್ ಪಂಜಿಗ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಸಂಜೀವ ಮಠಂದೂರು ಹಾಗೂ ದಿನೇಶ್ ಪಂಜಿಗ ಅವರು ತಮ್ಮ ವಾಟ್ಸಾಫ್ ನಲ್ಲಿ ಬಂದ್ ಗೆ ಕರೆಕೊಟ್ಟು ಜನರು ಅಕ್ರಮವಾಗಿ ಸೇರಿ ಕಾನೂನುಬಾಹಿರ ಕೃತ್ಯ ಎಸಗಲು ಪ್ರೇರಣೆ ನೀಡಿರುವುದು ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಈ ವಾಟ್ಸಾಫ್ ಸಂದೇಶ ಹರಡಿದ ಕಾರಣದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಪ್ರತಿಭಟನೆ ನಡೆಸುವ ಹಕ್ಕು ಎಲ್ಲರಿಗೂ ಇದೆ. ಅದಕ್ಕೆ ಪೊಲೀಸ್ ಇಲಾಖೆ ಅನುಮತಿ ನೀಡುತ್ತದೆ. ಆದರೆ ಪ್ರತಿಭಟನೆ ದಿನಾಂಕ ಮತ್ತು ಸಮಯವನ್ನು ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವ ಯಾವುದೇ ಅನ್ಯ ಉದ್ದೇಶದಿಂದ ನಿಗಧಿ ಪಡಿಸಿರುವುದು ಕಂಡುಬಂದಲ್ಲಿ ಸೂಕ್ತ ಕಾನೂನುಕ್ರಮ ಜರಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
































