
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ನ.22: ಕನ್ನಡ ಸಾಹಿತ್ಯ ಪರಿಷತ್ತಿನ ಚುನಾಯಿತ ಅಧ್ಯಕ್ಷರ ಅವಧಿಯು ನಾಳೆ .23 ಕ್ಕೆ ಕೊನೆಗೊಳ್ಳಲಿದ್ದು.ನ 24 ರಿಂದ ಜಿಲ್ಲಾ ಘಟಕಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸಿ ಪರಿಷತ್ತಿನ ಆಡಳಿತಾಧಿಕಾರಿ ಕೆ.ಎ.ದಯಾನಂದ ಆದೇಶ ಹೊರಡಿಸಿದ್ದಾರೆ.
ಬಳ್ಳಾರಿ ಜಿಲ್ಲಾ ಘಟಕಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕಮಾಡಲಾಗಿದೆ.
ಜಿಲ್ಲಾಧ್ಯಕ್ಷರುಗಳು ತಮ್ಮ ತಮ್ಮ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಚಿರ ಮತ್ತು ಸ್ಥಿರಾಸ್ತಿಗಳ ವಹಿವಾಟನ್ನು ಆಯಾ ಜಿಲ್ಲಾ ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳು ನೂತನ ಜಿಲ್ಲಾಧ್ಯಕ್ಷರುಗಳು ಚುನಾಯಿತರಾಗುವವರೆಗೆ ವಹಿಸಿಕೊಳ್ಳುವಂತೆ ನಿರ್ದೇಶಿಸಲಾಗಿದೆ. ಹಾಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರುಗಳು ತಕ್ಷಣ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಿರ ಮತ್ತು ಚರಾಸ್ತಿಗಳನ್ನು ಆಡಳಿತಾಧಿಕಾರಿಗಳಿಗೆ ವಹಿಸಿಕೊಡಲು ಸೂಚಿಸಿದೆ. ಈ ಬಗ್ಗೆ ಆಡಳಿತಾಧಿಕಾರಿಗಳು ಕ್ರಮಕೈಗೊಂಡು ವರದಿಯನ್ನು ಒಂದು ವಾರದಲ್ಲಿ ಸಲ್ಲಿಸುವುದು, ನೂತನ ಚುನಾಯಿತ ಅಧ್ಯಕ್ಷರು ಬರುವವರೆಗೆ ಪರಿಷತ್ತಿನ ಎಲ್ಲಾ ಜಿಲ್ಲಾ, ತಾಲ್ಲೂಕು, ಹೋಬಳಿ ಘಟಕಗಳ ಸಾಹಿತ್ಯಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ಎಂದಿನAತೆ ಮುಂದುವರೆಸುವAತೆ ಆದೇಶಿಸಿದ್ದಾರೆ.




















