Home ಜಿಲ್ಲೆ ಸ್ವಾಗತ ಬ್ಯಾನರ್ ನಲ್ಲಿ ಉಸ್ತುವಾರಿ ಸಚಿವರ ಫೋಟೋ ಮಾಯ-ಆಕ್ರೋಶ

ಸ್ವಾಗತ ಬ್ಯಾನರ್ ನಲ್ಲಿ ಉಸ್ತುವಾರಿ ಸಚಿವರ ಫೋಟೋ ಮಾಯ-ಆಕ್ರೋಶ

ಸಂಜೆವಾಣಿ ವಾರ್ತೆ

ಹೊಸಪೇಟೆ.ಜು.7 ಕಾಂಗ್ರೇಸ್ ಪಕ್ಷದ ಸ್ವಾಗತ ಕೋರುವ ಬ್ಯಾನರ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರ ಫೋಟೋ ಕೈಬಿಟ್ಟಿರುವುದಕ್ಕೆ ್ರ ಕಾಂಗ್ರೇಸ್ ಕಾರ್ಯಕರ್ತರು ಹಾಗೂ ದಲಿತ ಸಂಘಟನೆಗಳ ಮುಖಂಡರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇಂಧನ ಸಚಿವ ಕೆ.ಜೆ.ಜಾರ್ಜ್ ಇಂದು ನಗರಕ್ಕೆ ಆಗಮಿಸುವ ಹಿನ್ನಲೆಯಲ್ಲಿ ಸ್ಥಳೀಯ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು ಹಾಗೂ ಸ್ಥಳೀಯ ಶಾಸಕ ಹೆಚ್.ಆರ್.ಗವಿಯಪ್ಪ ಅಳವಡಿಸಿರುವ ಸ್ವಾಗತ ಕೋರುವ ಬ್ಯಾನರ್ ಗಳಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಫೋಟೋ ಹಾಕಿ,  ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರ ಫೋಟೋ ಕೈಬಿಟ್ಟಿರುವುದಕ್ಕೆ ಕಾಂಗ್ರೇಸ್ ಕಆರ್ಯಕರ್ತರು ಹಾಗೂ ದಲಿತ ಸಂಘಟನೆಗಳ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಕೆ.ಜೆ.ಜಾರ್ಜ್ ಗೆ ಸ್ವಾಗತ ಕೋರುವ ಬ್ಯಾನರ್ ಗಳಲ್ಲಿ ಆಹಾರ ಮತ್ತು ನಾಗರೀಕ ವ್ಯವಹಾರಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರ ಫೋಟೋ ಕೈಬಿಟ್ಟಿರುವುದು ಪಕ್ಷದ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳ ಭಾವನೆಗಳಿಗೆ ತೀವ್ರ ಧಕ್ಕೆಯನ್ನುಂಟು ಮಾಡಿದೆ. ಒಬ್ಬ ದಲಿತ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಫೋಟೋ ವನ್ನು ಸ್ವಾಗತ ಬ್ಯಾನರ್ ನಲ್ಲಿ ಕೈಬಿಟ್ಟಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ. ಇಂತಹ ಘಟನೆಗಳು ಇದೇ ರೀತಿ ಮುಂದುವರೆಸಿದರೆ, ಮುಂದಿನ ದಿನಗಳಲ್ಲಿ ದಲಿತ ಸಂಘಟನೆಗಳ ನೇತೃತ್ವದಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

-ಕೋಟ್-

ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಸ್ವಾಗತ ಕೋರುವ ಬ್ಯಾನರ್ ನಲ್ಲಿ ಆಹಾರ ನಾಗರೀಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರ ಫೋಟೋ ಕೈಬಿಟ್ಟಿರುವುದು ತೀವ್ರ ಖಂಡನೀಯ. ಇಂತಹ ಘಟನೆಗಳು ಮರುಕಳಿಸಿದರೆ, ಉಗ್ರ ಹೋರಾಟ ನಡೆಸಬೇಕಾಗುತ್ತದೆ.

ಸಿ.ಆರ್.ಭರತ್ ಕುಮಾರ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ

ಮಾದಿಗ ಮಹಾಸಭಾ(ರಿ) ವಿಜಯನಗರ.