ಹೊಸ ವರ್ಷದ ಪ್ರಾರಂಭದ ದಿನಕ್ಕೆ ಕಾಲಿಟ್ಟ ಆಹೋರಾತ್ರಿ ಧರಣಿ

ಸಂಜೆವಾಣಿ ವಾರ್ತೆ
ಹನೂರು: ಜ 1 :-
ಕಾವೇರಿ ನದಿಯಿಂದ ದಂಟಳ್ಳಿ ಮಾರ್ಗವಾಗಿ ಏತ ನೀರಾವರಿ ಯೋಜನೆ ಕಲ್ಪಿಸುವಂತೆ ಆಗ್ರಹಿಸಿ ವಡಕೆಹಳ್ಳ ಗ್ರಾಮದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ದಂಟಳ್ಳಿ ಏತ ನೀರಾವರಿ ಹೋರಾಟ ಸಮಿತಿ ರೈತರ ಆಹೋರಾತ್ರಿ ಧರಣಿ ಪ್ರತಿಭಟನೆ 66 ದಿನಗಳನ್ನು ಪೂರೈಸಿ 67 ನೇ ದಿನ ಗುರುವಾರ ಹೊಸ ವರ್ಷದ ಪ್ರಾರಂಭದ ದಿನಕ್ಕೆ ಕಾಲಿಟ್ಟಿದೆ.

ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂ. ಶೆಟ್ಟಿಹಳ್ಳಿ, ಕುರಟ್ಟಿಹೊಸೂರು ಪಂ ಗ್ರಾಮಗಳಿಗೆ ಕಾವೇರಿ ನದಿಯಿಂದ ದಂಟಳ್ಳಿ ಮಾರ್ಗವಾಗಿ ಏತ ನೀರಾವರಿ ಯೋಜನೆ ಕಲ್ಪಿಸುವಂತೆ ಆಗ್ರಹಿಸಿ ಸೋಮವಾರ ನಡೆದ 66 ನೇ ದಿನದ ಪ್ರತಿಭಟನೆಯಲ್ಲಿ ಈ ಭಾಗದ ನೀರಾವರಿ ಯೋಜನೆ ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿ ಶಾಸಕರು ಸಂಸದರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಅಹೋ ರಾತ್ರಿ ಧರಣಿ ನಡೆಸಿದರು. ದಿನಾಂಕ : 27-10-2025 ರಿಂದ ಕಾವೇರಿ ನದಿಯಿಂದ ದಂಟಳ್ಳಿ ಮಾರ್ಗವಾಗಿ ಏತ ನೀರಾವರಿ ಸೌಲಭ್ಯ ಕಲ್ಪಿಸುವಂತೆ ಹಾಗೂ ಇನ್ನುಳಿದ ಸಮಸ್ಯೆಗಳನ್ನು ಬಗೆಹರಿಸುವಂತೆ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದು 66 ದಿನ ಕಳೆದರೂ ಈ ಭಾಗದ ಸಮಸ್ಯೆಯನ್ನು ಬಗೆಹರಿಸುವಲ್ಲಿ ಶಾಸಕರು, ಜಿಲ್ಲಾಡಳಿತ ಮತ್ತು ಸರ್ಕಾರ ವಿಫಲವಾಗಿವೆ ಎಂದು ಧರಣಿ ನಿರತರು ಆರೋಪಿಸಿ ಧಿಕ್ಕಾರ ಕೂಗಿದರು. ಪ್ರತಿಭಟನೆಯನ್ನು ಮುಂದುವರೆಸಿದರು.

ರೈತ ಹೋರಾಟಗಾರ ಆರ್ಪುದರಾಜ್ ಮಾತನಾಡಿ ಅಹೋರಾತ್ರಿ ಧರಣೀಯ ಮೊದಲ ದಿನ ಆಗಮಿಸಿದ ಶಾಸಕರು ಸಂಕ್ರಾಂತಿಯ ಒಳಗೆ ಡಿ.ಪಿ.ಆರ್ ಮಾಡಿಸಿಕೊಡುತ್ತೇನೆ ನನ್ನಲ್ಲಿ ಮಾಡಿಕೊಡಲು ಸಾಧ್ಯವಾಗದ ಪಕ್ಷದಲ್ಲಿ ನಾನೇ ನಿಮ್ಮ ಜೊತೆ ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಳ್ಳುವುದಾಗಿ ತಾವು ಹೇಳಿರುತ್ತೀರಿ ನೀವು ಹೇಳಿರುವ ದಿನ ಸಮೀಪಿಸುತ್ತಿದ್ದು ಶಾಸಕ ಮಂಜುನಾಥ್ ಅವರು ತಮ್ಮ ಬೆಂಬಲಿಗರ ಜೊತೆ ಅಹೋರಾತ್ರಿ ಧರಣಿಗೆ ಬರಬೇಕು ಎಂದು ಆಹ್ವಾನ ನೀಡುತ್ತಿದ್ದೇವೆ ಎಂದು ತಿಳಿಸಿದರು.